October 19, 2026
Monday, October 19, 2026
spot_img

90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ, ಸರ್ಕಾರದಿಂದ ಗುಡ್‌ನ್ಯೂಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಂಗನವಾಡಿ ಕೇಂದ್ರಗಳಲ್ಲಿ ಯಾವ ಹುದ್ದೆ ಖಾಲಿ ಇದೆಯೋ ಆ ಹುದ್ದೆಗಳನ್ನು ಇನ್ನು 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ವಿಧಾನಸಭೆಯ ಕಲಾಪದಲ್ಲಿ ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಸಚಿವೆ ಉತ್ತರಿಸಿದರು.

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಇಲ್ಲದಿದ್ದರೆ, ಗ್ರಾಮ ಪಂಚಾಯತ್‌ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರೂ ಅಂಥ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು ಎಂದು ಸಚಿವೆ ಮಾಹಿತಿ ಮಾಡಿದರು.

Must Read