ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯಾ ಶ್ರೀರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿರುವ ಬೆನ್ನಿಗೇ ಈಗ ಶ್ರೀರಾಮನ ಭಕ್ತರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡುವ ತಯಾರಿಯಲ್ಲಿದೆ!
ಭಕ್ತರಿಗೆ ಅನುಕೂಲವಾಗುವಂತೆ ದೇಶದ ವಿವಿಧ ಭಾಗಗಳಿಂದ ಬರೋಬ್ಬರಿ ಒಂದು ಸಾವಿರ ವಿಶೇಷ ರೈಲುಗಳನ್ನು ಆರಂಭಿಸಲು ಲಾಖೆ ಯೋಜನೆ ರೂಪಿಸುತ್ತಿದೆ. ಎಲ್ಲವೂ ಅಂದುಕೊಂಡಂತೆಯೇ ನಡೆದರೆ ಜ.19 ರಿಮದ ಈ ರೈಲುಗಳ ಸೇವೆ ಭಕ್ತರಿಗೆ ಸಿಗಲಿದೆ.
ಈ ವಿಶೇಷ ರೈಲುಗಳನ್ನು ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಪುಣೆ, ಕೋಲ್ಕತ್ತಾ, ನಾಗ್ಪುರ, ಲಕ್ನೋ ಮತ್ತು ಜಮ್ಮು ಸೇರಿದಂತೆ ಪ್ರಮುಖ ನಗರಗಳಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸಲು ಬಳಸಲಾಗುತ್ತದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ