Saturday, September 13, 2025

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ: ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ರಹ್ಮಾವರ ಠಾಣೆ ಪರಿಸರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಬಂದೋಬಸ್ತ್ ಬಿಗಿಗೊಳಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋ ಹರಿದಾಡಿದ್ದು, ಇದರ ಬೆನ್ನಿಗೇ ವ್ಯಕ್ತಿಯೋರ್ವರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸರು ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ ತಾಲೂಕು ಉಜಿರೆಯ ಮಹೇಶ್ ಶೆಟ್ಟಿ ನಿವಾಸಕ್ಕೆ ಆಗಮಿಸಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರಕ್ಕೆ ಕರೆದೊಯ್ದಿದ್ದು, ಕೆಲಕಾಲ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ