ವರ್ಗಾವಣೆ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಗ್ರೂಪ್‌ A.B.C.D ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧ ಸರ್ಕಾರದಿಂದ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿ ಪ್ರಕಟಿಸಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ 2023-24ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳ ತಿಳಿಸಿದ್ದಾರೆ.

ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಮಾತ್ರ ಮಾರ್ಗಸೂಚಿಗಳಲ್ಲಿವ ಷರತ್ತುಗಳಿಗೆ ಒಳಪಟ್ಟು ವರ್ಗಾವಣೆ ಮಾಡಬಹುದಾಗಿದೆ ಎಂದಿದ್ದಾರೆ.

2023-24ನೇ ಸಾಲಿನ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ಸರ್ಕಾರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು 2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟನ್ನು ಮೀರದಂತೆ ಜೂನ್ 1ರಿಂದ 1೫ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!