ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮುಜರಾಯಿ ದೇವಾಲಯಗಳನ್ನು ಬರುವ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಮುಕ್ತಗೊಳಿಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ದೇವಸ್ಥಾನಗಳ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಹಲವಾರು ದೇವಾಲಯಗಳು ಪ್ರಸಾದ ವಿತರಿಸಲು ಪ್ಲಾಸ್ಟಿಕ್ ಕವರ್‌ಗಳು, ತೀರ್ಥಗಳಿಗೆ ಪ್ಲಾಸ್ಟಿಕ್ ಬಾಟಲಿಗಳು ಮತ್ತು ಭಕ್ತರಿಗೆ ಕುಂಕುಮ ನೀಡಲು ಪ್ಲಾಸ್ಟಿಕ್ ಸ್ಯಾಚೆಟ್‌ಗಳನ್ನು ಬಳಸುತ್ತಿವೆ. ಇವುಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ.
ಈ ವರ್ಷ ಆಗಸ್ಟ್ 15 ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು. ದೇವಾಲಯಗಳಿಗೆ ಅಸ್ತಿತ್ವದಲ್ಲಿರುವ ಪ್ಲಾಸ್ಟಿಕ್ ಸ್ಟಾಕ್ ಅನ್ನು ವಿಲೇವಾರಿ ಮಾಡಲು ಎರಡು ತಿಂಗಳ ಕಾಲಾವಕಾಶ ನೀಡಲಾಗುವುದು ಎಂದು ಹೇಳಿದರು.
ಮುಂದಿನ ಮೂರು ತಿಂಗಳಲ್ಲಿ ಭೂಮಿ ಸೇರಿದಂತೆ ಎಲ್ಲಾ ದೇವಾಲಯಗಳ ವಿವರಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ದೇವಾಲಯಗಳಿಗೆ ಸೇರಿದ ಉಳಿದ 20,000 ಎಕರೆ ಭೂಮಿಯ ದಾಖಲಾತಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.