Thursday, August 11, 2022

Latest Posts

ಕೇಂದ್ರದ ಬೆನ್ನಲ್ಲೇ ರಾಜ್ಯದಲ್ಲೂ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 7 ರೂ. ಕಡಿತ

ಕೇಂದ್ರ ಸರ್ಕಾರವು ದೇಶದ ಜನತೆಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಕಡಿತಗೊಳಿಸಿದೆ.

ಈ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಪೆಟ್ರೋಲ್, ಡೀಸೆಲ್ ಬೆಲೆಯನ್ನು 7 ರೂಪಾಯಿ ಇಳಿಕೆ ಮಾಡಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರ ಡೀಸಲ್ ಮೇಲೆ 10 ರೂ. ಹಾಗೂ ಪೆಟ್ರೋಲ್ 05 ರೂ. ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ. ಈ ಮೂಲಕ  ಜನರಿಗೆ ದೀಪಾವಳಿಯ ಉಡಗೊರೆ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಅವರಿಗೆ ಅಭಿನಂದನೆಗಳು ಎಂದಿದ್ದಾರೆ.

ಕರ್ನಾಟಕ ರಾಜ್ಯ ಸರಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ. ಕಡಿಮೆಗೊಳಿಸಲು ನಿರ್ಧರಿಸಿದೆ ರ್ದರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ. ಆಗುವ ನೀರಿಕ್ಷೆಯಿದೆ‌ ಎಂದಿದ್ದಾರೆ.

ರಾಜ್ಯ ಸರಕಾರದ ಈ ನಿರ್ಧಾರ ಇಂದು ಸಾಯಂಕಾಲದಿಂದ ಅನ್ವಯವಾಗುವುದು. ಇದು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಸಿಎಂ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss