Tuesday, June 6, 2023

Latest Posts

ಬಿಜೆಪಿ ಸರಕಾರಗಳಿಂದ ಎಸ್‍ಟಿ ಸಮುದಾಯಕ್ಕಾಗಿ ಉತ್ತಮ ಯೋಜನೆಗಳು: ಸಚಿವ ಬಿ.ಶ್ರೀರಾಮುಲು

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಬಿಜೆಪಿ ಎಸ್‍ಟಿ ಮೋರ್ಚಾದ ವತಿಯಿಂದ ದಕ್ಷಿಣ ಭಾರತದ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಪರಿಶಿಷ್ಟ ಪಂಗಡದ ರಾಷ್ಟ್ರೀಯ ನೀತಿ ಮತ್ತು ಸಂಶೋಧನಾ ಕಾರ್ಯಾಗಾರವು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆಯಿತು.

ಉದ್ಘಾಟನೆ ನೆರವೇರಿಸಿದ ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯುತ್ತಮ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿವೆ. ಅವುಗಳು ಸರಿಯಾದ ಫಲಾನುಭವಿಯನ್ನು ಸಕಾಲದಲ್ಲಿ ತಲುಪುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ನೀತಿ ಮತ್ತು ಸಂಶೋಧನಾ ಘಟಕದ ರಾಷ್ಟ್ರೀಯ ಉಸ್ತುವಾರಿ ಡಾ. ಸುಮೇರ್ ಸಿಂಗ್ ಸೋಲಂಕಿ, ಸಹ ಉಸ್ತುವಾರಿ ಅಜೀಂ ಬೊಬ್ಬಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್‍ಟಿ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಗಂಗಾಧರ ನಾಯ್ಕ್, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್ ಹಾಗೂ ಪ್ರಮುಖ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!