ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆವಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾದರೆ , ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಯಾದಗಿರಿ, ಬೆಳಗಾವಿ, ಧಾರವಾಡ, ಗದಗದಲ್ಲಿ ಸಾಧಾರಣ ಮಳೆಯಾಗಲಿದೆ. ವಿಜಯನಗರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.