ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕರಾವಳಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿದ್ದು, ಮಂಗಳೂರಿನ (Mangaluru) ವಿವಿದೆಡೆ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.
ಕರಾವಳಿಯ ಜಿಲ್ಲೆಗಳಾದ (Coastal Karnataka) ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಂಗಳವಾರ ರಾತ್ರಿಯಿಂದ ಮಳೆ ಸುರಿದಿದ್ದು, ಬುಧವಾರ ಬೆಳಗಿನ ಜಾವದವರೆಗೂ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 169 ಮಿಮೀ ಮಳೆಯಾಗಿದ್ದರೆ, ಉತ್ತರ ಕನ್ನಡದಲ್ಲಿ 122 ಮಿಮೀ ಮತ್ತು ಉಡುಪಿಯಲ್ಲಿ 123 ಮಿಮೀ ಗಿಂತ ಹೆಚ್ಚು ಮಳೆ ದಾಖಲಾಗಿದೆ.
ಮುಂದಿನ ದಿನಗಳಲ್ಲೂ ರಾಜ್ಯದಾದ್ಯಂತ ಅನೇಕ ಕಡೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಮೂಡುಬಿದಿರೆ ಮತ್ತು ಕಡಬ ತಾಲೂಕುಗಳು, ಕುಂದಾಪುರ, ಉಡುಪಿ, ಬೈಂದೂರು, ಬ್ರಹ್ಮಾವರ, ಕಾಪು ಮತ್ತು ಉಡುಪಿ ಜಿಲ್ಲೆಯ ಹೆಬ್ರಿ ಮತ್ತು ಅಂಕೋಲಾ, ಭಟ್ಕಳ ತಾಲೂಕುಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.