ಕಾಂಗ್ರೆಸ್‌ಗೆ ಬಂದಿದ್ದಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ: ಶೆಟ್ಟರ್

ಹೊಸದಿಗಂತ ವರದಿ ಹುಬ್ಬಳ್ಳಿ:

ಇಲ್ಲಿಯ ಕುಸುಗಲ್ ರಸ್ತೆ ಶಬರಿ ನಗರದ ಎಸ್.ಬಿ.ಐ ಆಂಗ್ಲ ಮಾಧ್ಯಮ ಶಾಲೆಯ ಮತಗಟ್ಟೆ ನಂ. 122 ರಲ್ಲಿ ಹು-ಧಾ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ್ ಕುಟುಂಬ ಸಮೇತವಾಗಿ ಬಂದು ಮತ ಚಲಾಯಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಡೆ ದೊಡ್ಡ ಪ್ರಮಾಣದಲ್ಲಿ ಮತದಾನ ಜರುಗುತ್ತಿದೆ. ನಾನು ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಬಳಿಕ ಜನರಿಂದ ಹಿಂದಿಗಿಂತಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನರ ಉತ್ಸಾಹ ಗಮನಿಸಿದರೆ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!