ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರೋಗ್ಯ ಇಲಾಖೆ ರಾಜ್ಯಾದ್ಯಂತ ಭಾನುವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ವಿತರಣಾ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರಕಿದೆ.
ಐದು ವರ್ಷದೊಳಗಿನ ಮಕ್ಕಳಲ್ಲಿ 60.41 ಲಕ್ಷ ಮಕ್ಕಳ ಬಾಯಿಗೆ ಎರಡು ಹನಿ ಪೋಲಿಯೋ ಡ್ರಾಪ್ಸ್ ಹಾಕಲಾಗಿದೆ.
ಇಲಾಖೆ ಈ ಬಾರಿ 62.84 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಿತ್ತು. ಇದರಲ್ಲಿ ಶೇ,96ರಷ್ಟು ಗುರಿ ತಲುಪಿದ್ದು, ಉಳಿದ ಮಕ್ಕಳಿಗಾಗಿ ಮನೆ ಮನೆಗೆ ತೆರಳಿ ಲಸಿಕೆ ಹನಿ ಹಾಕಲಾಗುತ್ತದೆ.
ಬರೀ ಅಂಗನವಾಡಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅಷ್ಟೇ ಅಲ್ಲದೆ ಬಸ್ ನಿಲ್ದಾಣ, ಮೆಟ್ರೋ, ರೈಲ್ವೆ ನಿಲ್ದಾಣ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿಯೂ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಲಾಗಿತ್ತು.