ಕ್ರಿಕೆಟ್​ಗೆ ಹಿಟ್ ಮ್ಯಾನ್ ಗುಡ್ ಬೈ?: ಈ ಕುರಿತು ರೋಹಿತ್ ಏನಂತಾರೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದ ನಾಯಕ ರೋಹಿತ್​ ಶರ್ಮ ವಿಶ್ವ ಕೆಲವೇ ದಿನಗಳಲ್ಲಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆದಿತ್ತು. ಅಲ್ಲದೆ ರೋಹಿತ್​ಗೂ ಈ ಕುರಿತು ಮಾಧ್ಯಮದವರು ಪ್ರಶ್ನೆ ಕೇಳಿದ್ದರು. ಈ ಕುರಿತು ಸ್ವತಃ ರೋಹಿತ್ ಸ್ಪಷ್ಟನೆ ನೀಡಿದ್ದಾರೆ.

ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಮಾತನಾಡಿದ ರೋಹಿತ್​, ನಾನು ನಿವೃತ್ತಿಯ ಬಗ್ಗೆ ಈಗಲೇ ಏನೂ ಯೋಚನೆ ಮಾಡಿಲ್ಲ. ಜೀವನವು ನಮ್ಮನ್ನು ಎಲ್ಲಿಗೆ ಕರೆದೊಯ್ಯುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಪ್ರಸ್ತುತ ನಾನು ಚೆನ್ನಾಗಿ ಆಡುತ್ತಿದ್ದು, ಮುಂದಿನ ಕೆಲ ವರ್ಷಗಳ ಕಾಲ ಭಾರತ ಪರ ಟೆಸ್ಟ್​ ಮತ್ತು ಏಕದಿನ ಆಡುವ ಯೋಜನೆಯಲ್ಲಿದ್ದೇನೆ ಎಂದು ಹೇಳುವ ತಮ್ಮ ನಿವೃತ್ತಿ ಕುರಿತ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.

ಸದ್ಯ ರೋಹಿತ್​ ವಿಶ್ರಾಂತಿಯಲ್ಲಿದ್ದು ಶ್ರೀಲಂಕಾ ವಿರುದ್ಧದ ಸರಣಿಗೂ ಗೈರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ರೋಹಿತ್ ನಾಯಕತ್ವದಲ್ಲಿ, ಜೂನ್​ 29ರಂದು ಬಾರ್ಬಡೋಸ್‌ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳ ಜಯದೊಂದಿಗೆ 11 ವರ್ಷಗಳ ಐಸಿಸಿ ಪ್ರಶಸ್ತಿ ಬರವನ್ನು ಕೊನೆಗೊಳಿಸಿತ್ತು.

ಏಕದಿನ ಮತ್ತು ಟೆಸ್ಟ್ ಮಾದರಿಗಳಲ್ಲಿ ರೋಹಿತ್ ಶರ್ಮ ಭಾರತ ತಂಡದ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಈಗಾಗಲೇ ಹೇಳಿಕೆ ನೀಡಿದ್ದಾರೆ. ಜತೆಗೆ ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್​ ಟ್ರೋಫಿ ಟೂರ್ನಿಯಲ್ಲಿಯೂ ರೋಹಿತ್​ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!