ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಮುಖ್ಯಮಂತ್ರಿ ಚಂದ್ರು ನಾಳೆ ಅಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕರೆಂದೇ ಗುರುತಿಸಿಕೊಂಡಿದ್ದ ಖ್ಯಾತ ನಟ ಮುಖ್ಯಮಂತ್ರಿ ಚಂದ್ರು ನಾಳೆ ಅಧಿಕೃತವಾಗಿ ಅಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
ಈ ಕುರಿತಂತೆ ಎಎಪಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ನಾಡಿನ ಸಜ್ಜನ ಗಣ್ಯರ ಆಮ್‌ ಆದ್ಮಿ ಪಾರ್ಟಿ ಸೇರ್ಪಡೆ ಪರ್ವ ಮುಂದುವರಿದಿದ್ದು, ಈಗ ಖ್ಯಾತ ನಟ ಹಾಗೂ ವಿಧಾನಸಭೆ, ವಿಧಾನ ಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಆಮ್‌ ಆದ್ಮಿ ಪಾರ್ಟಿ ಸೇರ್ಪಡೆಯಾಗುತ್ತಿದ್ದಾರೆ ಎಂಬುದಾಗಿ ತಿಳಿಸಿದೆ.
ನಾಳೆ ಬೆಳಿಗ್ಗೆ 11.30ಕ್ಕೆ ಕರ್ನಾಟಕ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಅವರ ಸಮ್ಮುಖದಲ್ಲಿ, ಬೆಂಗಳೂರಿನ ಪರಾಗ್ ಹೋಟೆಲ್ ನಲ್ಲಿ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ನಟ ಮುಖ್ಯಮಂತ್ರಿ ಚಂದ್ರು ಅವರು ಎಎಪಿ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!