ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು ಎನ್ನುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲಿ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಯಾಗಿದ್ದಾರೆ. ಈ ಮೂಲಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಿಂದ ಹಾಸನ ಮಾರ್ಗವಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಚನ್ನರಾಯಪ್ಪಟ್ಟಣ, ಹಿರಿಸಾವೆ ಮೂಲಕ ಬೆಂಗಳೂರಿಗೆ 6 ನಕ್ಸಲರನ್ನು ಕರೆದುಕೊಂಡು ಬರಲಾಗಿತ್ತು.
ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾಗೆ ಸಂಜೆ 6 ಗಂಟೆಗೆ ನಕ್ಸಲರು ಆಗಮಿಸಿದರು. ಈ ವೇಳೆ ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿದ ನಕ್ಸಲರು, ಆ ಬಳಿಕ ಅವರ ಸಮ್ಮುಖದಲ್ಲಿ ಶರಣಾಗತಿಯಾದರು.
ಸಿಎಂ ಸಿದ್ಧರಾಮಯ್ಯ ಅವರು ಶರಣಾಗತಿಯಾದಂತ 6 ನಕ್ಸಲರಿಗೆ ಹೂ ಗುಚ್ಚ ನೀಡಿ, ಸಾರ್ವಜನಿಕ ಬದುಕಿಗೆ ಬರ ಮಾಡಿಕೊಂಡರು. ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ನಕ್ಸಲರು ಭೇಟಿಯಾದರು. ಈ ವೇಳೆ ನಕ್ಸಲರ ಜೊತೆ ಸಿಎಂ ಮಾತುಕತೆ ನಡೆಸಿದರು.
ಆರು ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಶರಣಾಗತಿಯಾದರು.