ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಕಿರುತೆರೆಯ ಗೊಂಬೆ ನೇಹಾ ಗೌಡ ಮನೆಯಲ್ಲಿ ಸಂತಸ ಮನೆ ಮಾಡಿದೆ.
ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ ಕನ್ನಡಿಗರ ಮನಸ್ಸಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿರೋ ನೇಹಾ ಗೌಡ ದಂಪತಿ ತಂದೆ-ತಾಯಿಯಾದ ಖುಷಿ ಸುದ್ದಿ ಹಂಚಿಕೊಂಡಿದ್ದಾರೆ.
ನಟಿ ನೇಹಾ ಗೌಡ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇನ್ಸ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿರುವ ನೇಹಾ ಗೌಡ ಅವರು ತಾಯಿಯಾದ ಸಂತಸ ವ್ಯಕ್ತಪಡಿಸಿದ್ದಾರೆ. ನೇಹಾ ಗೌಡ, ಚಂದನ್ ಗೌಡ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.