Tuesday, March 21, 2023

Latest Posts

ಜಲ ಜೀವನ್ ಮಿಷನ್ ಯೋಜನೆಯ ಲಕ್ಷಾಂತರ ಮೌಲ್ಯದ ವಸ್ತುಗಳು ಕಳವು !

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಕಳೆದ ರಾತ್ರಿ ಉತ್ತರ ಪ್ರದೇಶದ ಭರ್ತಾನ ಕೊತ್ವಾಲಿ ಪ್ರದೇಶದ ತಹಸಿಲ್ ಪ್ರಧಾನ ಕಚೇರಿ ಬಳಿಯ ಗೋಡೌನ್‌ನಲ್ಲಿ ಇರಿಸಲಾಗಿದ್ದ ಜಲ ಜೀವನ್ ಮಿಷನ್ ಯೋಜನೆಯ 37 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಆರು ಮಂದು ಅಪರಿಚಿತ ದುಷ್ಕರ್ಮಿಗಳು ಕಳವು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌

ಪೊಲೀಸರ ಪ್ರಕಾರ, ನಿನ್ನೆ ರಾತ್ರಿ ಅಪರಿಚಿತ ವಾಹನದಲ್ಲಿ ಬಂದ ದುಷ್ಕರ್ಮಿಗಳು ಜಲ ಜೀವನ್ ಮಿಷನ್ ಯೋಜನೆಯಲ್ಲಿ ತೊಡಗಿರುವ ನಿರ್ಮಾಣ ಸಂಸ್ಥೆಯ ಅಂಗಡಿಯಿಂದ 37 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕದ್ದೊಯ್ದಿದ್ದಾರೆ.

ಜಲ ಜೀವನ್ ಮಿಷನ್ ಯೋಜನೆಯ ಅಡ್ಮಿನ್ ಮ್ಯಾನೇಜರ್ ಅಮಿತ್ ಕುಮಾರ್ ಶ್ರೀವಾಸ್ತವ ಮಾತನಾಡಿ, ನಾಲ್ವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವ ಪೊಲೀಸರು ಘಟನಾ ಸ್ಥಳ ಪರಿಶೀಲನೆ ನಡೆಸಿದಾಗ ತಜ್ಞರ ತಂಡವನ್ನು ಕರೆಸಿ ಸಾಕ್ಷ್ಯ ಸಂಗ್ರಹಿಸಿದ್ದಾರೆ.

ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಕಾನ್ಪುರ, ಹಿರಿಯ ಪೊಲೀಸ್ ಅಧೀಕ್ಷಕರು (ಎಸ್‌ಎಸ್‌ಪಿ) ಮತ್ತು ಇತರ ಉನ್ನತ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು.

ಜಲ ಜೀವನ್ ಮಿಷನ್ ಯೋಜನೆಯಡಿ ಕೆಲವು ಹಿತ್ತಾಳೆ ವಸ್ತುಗಳು ಬಂದಿದ್ದು, ಅದರಲ್ಲಿ ಸುಮಾರು 58 ಬಾಕ್ಸ್‌ಗಳು ನಾಪತ್ತೆಯಾಗಿವೆ. ಕೆಲ ಕಿಡಿಗೇಡಿಗಳು‌ ಈ ಕೃತ್ಯ ಎಸಗಿದ್ದಾರೆ. ಘಟನೆಯನ್ನು ಶೀಘ್ರವೇ ಬಹಿರಂಗಪಡಿಸಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಎಸ್‌ಪಿ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!