Monday, October 2, 2023

Latest Posts

SHOCKING| ಮಧ್ಯಪ್ರದೇಶದಲ್ಲಿ ಹಳಿತಪ್ಪಿದ ಎಲ್‌ಪಿಜಿ ಸಾಗಿಸುತ್ತಿದ್ದ ಗೂಡ್ಸ್ ರೈಲು 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳವಾರ ರಾತ್ರಿ ಮಧ್ಯಪ್ರದೇಶ ರಾಜ್ಯದಲ್ಲಿ ಎಲ್‌ಪಿಜಿ ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿದೆ. ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ಭಾರತ್ ಪೆಟ್ರೋಲಿಯಂಗೆ ಸೇರಿದ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್‌ಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲಿನಿಂದ ಎರಡು ಬೋಗಿಗಳು ಹಳಿತಪ್ಪಿವೆ. ಗೂಡ್ಸ್ ರೈಲು ಹಳಿತಪ್ಪಿದ ಕೂಡಲೇ ಚಾಲಕ ನಿಲ್ಲಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಜಬಲ್‌ಪುರ ಜಿಲ್ಲೆಯ ಶಾಪುರಾ ಭಿಟೋನಿ ನಿಲ್ದಾಣದ ಭಾರತ್ ಪೆಟ್ರೋಲಿಯಂ ಡಿಪೋ ಬಳಿ ಈ ಘಟನೆ ನಡೆದಿದೆ.

ಮಾಹಿತಿ ತಿಳಿದ ತಕ್ಷಣ ರೈಲ್ವೆ ಅಧಿಕಾರಿಗಳು ತಡರಾತ್ರಿ ಅಪಘಾತ ರಕ್ಷಣಾ ವಾಹನ ಸಮೇತ ಸ್ಥಳಕ್ಕೆ ಧಾವಿಸಿದರು. ರೈಲ್ವೆ ಸಿಬ್ಬಂದಿ ಹಳಿ ತಪ್ಪಿದ ಬೋಗಿಗಳನ್ನು ಹೊರ ತೆಗೆಯುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದ ನಂತರ ಸರಣಿ ಘಟನೆಗಳು ನಡೆಯುತ್ತಿವೆ. ಸರಣಿ ರೈಲು ಅಪಘಾತಗಳಿಂದಾಗಿ ರೈಲ್ವೆ ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಒಡಿಶಾದಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿದೆ. ಜಾರ್ಖಂಡ್ ರಾಜ್ಯದಲ್ಲಿ ಮತ್ತೊಂದು ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಗಿದೆ.

ಮತ್ತೊಂದೆಡೆ ಬೆಂಗಳೂರು ಎಕ್ಸ್‌ಪ್ರೆಸ್ ದೊಡ್ಡ ಅಪಘಾತವನ್ನು ತಪ್ಪಿಸಿದೆ. ಮಂಗಳವಾರ ರಾತ್ರಿ ಕಾಚಿಗುಡದಿಂದ ಬೆಂಗಳೂರಿಗೆ ಹೊರಟಿದ್ದ ಎಕ್ಸ್‌ಪ್ರೆಸ್ ರೈಲು ಮಹೆಬೂಬ್‌ನಗರ ಜಿಲ್ಲೆಯ ಬಾಲನಗರ ರೈಲು ನಿಲ್ದಾಣದಲ್ಲಿ ಹಠಾತ್ ಬ್ರೇಕ್ ಹಾಕಿದಾಗ ರೈಲಿನ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿತು. ರೈಲ್ವೆ ಸಿಬ್ಬಂದಿ ಕೂಡಲೇ ಎಚ್ಚೆತ್ತು ಬೆಂಕಿ ನಂದಿಸಿದ್ದಾರೆ. ಇದರಿಂದ ಅಪಾಯ ತಪ್ಪಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!