ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೂಡ್ಸ್ ರೈಲೊಂದು ಹಳಿ ತಪ್ಪಿದ ಘಟನೆ ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ನಡೆದಿದೆ. ಈ ಗೂಡ್ಸ್ ರೈಲು ಕಡಪದಿಂದ ಗುಂತಕಲ್ ಕಡೆಗೆ ಹೋಗುತ್ತಿದ್ದಾಗ ಈ ಅವಘಡ ಉಂಟಾಗಿದೆ.
ಕಡಪ ರೈಲು ನಿಲ್ದಾಣದ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಮಾಹಿತಿ ತಿಳಿದ ರೈಲ್ವೇ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದರು. ಈ ಅವಘಡದಿಂದಾಗಿ ಗುಂತಕಲ್ ಮತ್ತು ಕಡಪ ನಡುವೆ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, ಗೂಡ್ಸ್ ರೈಲು ಹಳಿ ತಪ್ಪಿದ್ದಕ್ಕೆ ತನಿಖೆ ನಡೆಸುತ್ತಿದ್ದಾರೆ.