September 28, 2026
Monday, September 28, 2026
spot_img

ಬಿಡದಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ಬೆಂಗಳೂರು-ಮೈಸೂರು ರೈಲ್ವೆ ಸಂಚಾರದಲ್ಲಿ ವ್ಯತ್ಯಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಿಂದ ಮದ್ದೂರಿಗೆ ಹೋಗುತ್ತಿದ್ದ ಖಾಲಿ ಗೂಡ್ಸ್ ರೈಲು ಬಿಡದಿ ಬಳಿ ಹಳಿ ತಪ್ಪಿದ್ದು, ಅದೃಷ್ಟವಶಾತ್ ಅನಾಹುತ ತಪ್ಪಿದೆ.

ಸಂಜೆ 5 ಗಂಟೆ ಸುಮಾರಿಗೆ ತಾಂತ್ರಿಕ ದೋಷದಿಂದ ಹಳಿ ತಪ್ಪಿದೆ. ಕೂಡಲೇ ಲೋಕೋಪೈಲಟ್ ರೈಲನ್ನು ನಿಲ್ಲಿಸುವ ಮೂಲಕ ಯಾವುದೇ ಅನಾಹುತ ಸಂಭವಿಸದಂತೆ ಸಮಯಪ್ರಜ್ಞೆ ಮೆರೆದಿದ್ದಾರೆ.

ರೈಲು ಹಳಿ ತಪ್ಪಿದ್ದರಿಂದ ಇತ್ತ ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ರೈಲುಗಳು ಸಮೀಪದ ಕೆಂಗೇರಿ, ನಾಯಂಡಹಳ್ಳಿ, ಬೆಂಗಳೂರು ನಿಲ್ದಾಣಗಳಲ್ಲೇ ಬೀಡು ಬಿಟ್ಟಿವೆ. ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ರೈಲುಗಳು ಚನ್ನಪಟ್ಟಣ, ಮಂಡ್ಯದಲ್ಲೇ ನಿಂತಿವೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Must Read