September 26, 2026
Saturday, September 26, 2026
spot_img

ಹಾಸನದಲ್ಲಿ ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ: ತಂದೆ ಸಾ*ವು, ಮಗಳ ಸ್ಥಿತಿ ಗಂಭೀರ

ಹೊಸದಿಗಂತ ವರದಿ ಹಾಸನ:

ಮಗಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಮನೆಗೆ ತೆರಳುತ್ತಿದ್ದ ತಂದೆಯೊಬ್ಬರು ಐಶರ್ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು, ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ತೇಜುಗೆರೆ ಗ್ರಾಮದ ಬಳಿ ನಡೆದಿದೆ.

ನಂಜುಂಡೇಗೌಡ (58) ಮೃತ ದುರ್ದೈವಿ. ಅವರ ಮಗಳು ನಿಶ್ಚಿತ (33) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ನಂಜುಂಡೇಗೌಡ ಅವರು ಮಗಳು ನಿಶ್ಚಿತಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೊಳೆನರಸೀಪುರ ತಾಲ್ಲೂಕಿನ ಕೆರೆಕೋಡಿಹಳ್ಳಿ ಗ್ರಾಮದತ್ತ ತೆರಳುತ್ತಿದ್ದರು. ಈ ವೇಳೆ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಐಶರ್ ಗೂಡ್ಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಂಜುಂಡೇಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:

ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Must Read