ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ತಾಲೂಕಿನ ಸುವರ್ಣಸೌಧದ ಬಳಿ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ರೈತನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ (41) ಟ್ರ್ಯಾಕ್ಟರ್ ನಲ್ಲಿ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದವರು. ಈ ವೇಳೆ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ.
ಬೆಳಗಾವಿ ಮಾರುಕಟ್ಟೆಗೆ ಕೊತ್ತಂಬರಿ ಸೊಪ್ಪನ್ನು ಹೊತ್ತುಕೊಂಡು ಬೆಳಗಾವಿ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ರೈತನ ಟ್ರ್ಯಾಕ್ಟರ್ ಸಂಪೂರ್ಣ ಜಖಂಗೊಂಡಿದೆ. ಹಿರೇಬಾಗೇವಾಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.