ಸ್ವಾತಂತ್ರ್ಯ ಸಂಭ್ರಮಕ್ಕೆ ಗೂಗಲ್ ನಿಂದ ‘ಇಂಡಿಯಾ ಕೀ ಉಡಾನ್’ ಗಿಫ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ ಇದಕ್ಕೆ ಇನ್ನಷ್ಟು ಮೆರುಗು ನೀಡಲು ಸಾಫ್ಟ್‌ವೇರ್ ದೈತ್ಯ ಗೂಗಲ್ ಇಂಡಿಯಾ, ’ಇಂಡಿಯಾ ಕೀ ಉಡಾನ್’ ವಿಶೇಷ ವಿಡಿಯೋ ಬಿಡುಗಡೆ ಮಾಡಿದೆ.

ಭಾರತದ ಮೊದಲ ಸರ್ಕಾರ, ವಿಜ್ಞಾನ, ತಂತ್ರಜ್ಞಾನ, ಕೃಷಿ, 1983ರ ಮೊದಲ ವಿಶ್ವಕಪ್ ಗೆಲುವು, ಒಲಿಂಪಿಕ್ಸ್ … ಹೀಗೆ ದೇಶದ ಹಲವು ಸಾಧನೆಗಳನ್ನು ಸಾರುವ ವಿಡಿಯೋ ಈಗ ಎಲ್ಲರ ಆಕರ್ಷಣೆಗೆ ಕಾರಣವಾಗಿದೆ. ಇದೇ ವೇಳೆ ಭಾರತದ ಯಶಸ್ವಿ ಪಯಣವನ್ನು ಜತೆಗೂಡಿ ಸಂಭ್ರಮಿಸೋಣ ಎಂದು ಗೂಗಲ್ ಇಂಡಿಯಾ ಹೇಳಿದೆ.

ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದೊಂದಿಗೆ ಗೂಗಲ್ ಈ ವಿಡಿಯೋ ಸಂಗ್ರಹವನ್ನು ಬಿಡುಗಡೆ ಮಾಡಿದ್ದು, ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!