BREAKING | ಗೂಗಲ್‌ನ ಮುಂಬೈ ಕಚೇರಿಗೆ ಬಾಂಬ್ ಬೆದರಿಕೆ ಕರೆ : ಆರೋಪಿಯ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಟೆಕ್ ದೈತ್ಯ ಗೂಗಲ್‌ನ ಪುಣೆ ಕಚೇರಿಗೆ ಬಾಂಬ್ ಇಡಲಾಗಿದೆ ಎಂದು ಕರೆ ಬಂದಿದ್ದು, ನಂತರ ಅದು ಸುಳ್ಳು ಎಂದು ತಿಳಿದುಬಂದಿವುದಾಗಿ ಪೊಲೀಸರು ತಿಳಿಸಿದ್ದಾರೆ.

ಕರೆ ಮಾಡಿದ ವ್ಯಕ್ತಿಯನ್ನು ಹೈದರಾಬಾದ್‌ ನಲ್ಲಿ ಪತ್ತೆಹಚ್ಚಿ ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮುಂಬೈಗೆ ಕರೆತರಲು ಮುಂಬೈ ಪೊಲೀಸರ ತಂಡ ತೆಲಂಗಾಣಕ್ಕೆ ತೆರಳಿದೆ.

ಗೂಗಲ್‌ ಗೆ ಕರೆ ಮಾಡಿ ಬೆದರಿಕೆ ಹಾಕಿದ ವ್ಯಕ್ತಿಯು ಹೈದರಾಬಾದ್ ಮೂಲದ ಪನಯಂ ಶಿವಾನಂದ್ ಎಂದು ಗುರುತಿಸಲಾಗಿದೆ. ಶಿವಾನಂದ್ ನನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಲೀಸರ ಪ್ರಕಾರ ಕರೆ ಮಾಡಿದವನ ಬಳಿ ಪುಣೆಯಲ್ಲಿರುವ ಗೂಗಲ್ ಕಚೇರಿಯ ಸಂಖ್ಯೆ ಇರಲಿಲ್ಲ, ಆದ್ದರಿಂದ ಅವರು ಮುಂಬೈನಲ್ಲಿರುವ ಗೂಗಲ್ ಕಚೇರಿಯ ಪ್ರಧಾನ ಕಚೇರಿಗೆ ಬೆದರಿಕೆ ಕರೆ ಮಾಡಿದ್ದಾರೆ. ಪೊಲೀಸರು ಕರೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 505 (1) (ಬಿ) ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!