ಹೊಸದಿಗಂತ, ಬದಿಯಡ್ಕ:
ಭಗವಾನ್ ಶ್ರೀಕೃಷ್ಣನಿಗೆ ಪ್ರಿಯವಾದ ಗೋವಿನ ಪೂಜೆ ನೆರವೇರಿಸಿ ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಶನಿವಾರ ಗೋಧೂಳೀ ಲಗ್ನದಲ್ಲಿ ೩೩ ಕೋಟಿ ದೇವತೆಗಳ ಆವಾಸ ಸ್ಥಾನವಾದ ಗೋವಿನ ಮುಂಭಾಗದಲ್ಲಿ ಕ್ಷೇತ್ರದ ಅರ್ಚಕ ಪೂಜೆಗೈದ ಆಮಂತ್ರಣ ಪತ್ರಿಕೆಯನ್ನು ಉದ್ಯಮಿ ಗೋಪಾಲಕೃಷ್ಣ ಪೈ ಬದಿಯಡ್ಕ ಅವರು ಬಿಡುಗಡೆಗೊಳಿಸಿದರು.
ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನ ಮಾಜಿ ಆಡಳಿತ ಮೊಕ್ತೇಸರ ಹಿರಿಯರಾದ ಟಿ.ಕೆ. ನಾರಾಯಣ ಭಟ್ ಪಂಜಿತ್ತಡ್ಕ, ಉದ್ಯಮಿ ಸತೀಶ್ ಎಡನೀರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಮೊಕ್ತೇಸರ ನರಸಿಂಹ ಭಟ್ ಕಾರ್ಮಾರು, ಟ್ರಸ್ಟಿಗಳಾದ ರಾಧಾಕೃಷ್ಣ ರೈ, ನವೀನ್‌ಚಂದ್ರ, ಗೋಪಾಲ ಭಟ್ ಪಿ.ಎಸ್., ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಶ್ಯಾಮಪ್ರಸಾದ ಮೇಗಿನಡ್ಕ, ಶ್ರೀಕೃಷ್ಣ ಭಟ್ ಪುದುಕೋಳಿ, ಸುಂದರ ಶೆಟ್ಟಿ ಕೊಲ್ಲಂಗಾನ, ವಿಜಯಕುಮಾರ್ ಮಾನ್ಯ, ಜ್ಯೋತಿ ಕಾರ್ಮಾರು, ಪೂರ್ಣಿಮಾ ಕಾರ್ಮಾರು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕ್ಕುಂಜ, ಕೋಶಾಧಿಕಾರಿ ರಂಜಿತ್ ಯಾದವ್ ಹಾಗೂ ಭಗವದ್ಭಕ್ತರು ಪಾಲ್ಗೊಂಡಿದ್ದರು.