April 9, 2026
Thursday, April 9, 2026
spot_img

ನಾಳೆ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ಗೋಪೂಜೆ: ಸರ್ಕಾರ ಅಧಿಕೃತ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:


ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿಯ ಬಲಿಪಾಡ್ಯಮಿ ದಿನವಾದ ನಾಳೆ ಗೋಪೂಜೆ ಕಾರ್ಯಕ್ರಮ ನೆರವೇರಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ

ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮ ಆಚರಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರ್ನಾಟಕ ಸರ್ಕಾರ ರವರ ಮೌಖಿಕ ನಿರ್ದೇಶನ ನೀಡಿದ್ದಾರೆ ಎಂದಿದ್ದಾರೆ.

ಹಿಂದು ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ, ವಿಶೇಷ ಸ್ಥಾನಮಾನವನ್ನು ನೀಡಿ ಪೂಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿರುವುದರಿಂದ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಗೋವುಗಳಿಗೆ ಸ್ನಾನ ಮಾಡಿಸಿ ಅರಶಿನ ಕುಂಕುಮ ಹೂವುಗಳಿಂದ ಅಲಂಕರಿಸಿ ಅಕ್ಕಿ ಬೆಲ್ಲ ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ ಗೋಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !