Saturday, October 1, 2022

Latest Posts

ಗೋರೆಗಾಂವ್‌ ಪತ್ರಚಾಲ್‌ ಪ್ರಕರಣ: ಶಿವಸೇನೆ ಸಂಸದ ಸಂಜಯ್‌ ರಾವತ್‌ ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೋರೆಗಾಂವ್‌ ಪತ್ರಚಾಲ್‌ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಸೇನೆ ಸಂಸದ ಸಂಜಯ್‌ ರಾವತ್‌ ಅವರ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಲಾಗಿದೆ.
ಇಂದು ಅವರ ನ್ಯಾಯಾಂಗ ಬಂಧನಅಂತ್ಯಗೊಂಡಿದ್ದರಿಂದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಶಿವಸೇನಾ ಸಂಸದ ಸಂಜಯ್‌ ರಾವತ್‌ ಈ ಹಿಂದೆ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಂತರ ರಾವುತ್‌ ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಂತರ ವಿಶೇಷ ನ್ಯಾಯಾಲಯವು ಅವರ ನ್ಯಾಯಾಂಗ ಬಂಧನವನ್ನು ಸೆ. 19 ರವರೆಗೆ ವಿಸ್ತರಿಸಿತು. ಅನಂತರ ಇಂದು ವಿಚಾರಣೆ ನಡೆಸಲಾಯಿತು,

ಮುಂಬಯಿ ಗೋರೆಗಾಂವ್‌ ಪ್ರದೇಶದಲ್ಲಿನ ಪತ್ರಚಾಲ್‌ ಪುನರಾಭಿವೃದ್ಧಿಯಲ್ಲಿ ಹಣಕಾಸು ಅವ್ಯವಹಾರ ನಡೆಸಿದ ಆರೋಪದಲ್ಲಿ ರಾವತ್‌ ಅವರನ್ನು ಜಾರಿ ನಿರ್ದೇಶನಾಲಯ ಆಗಸ್ಟ್ 1 ರಂದು ಬಂಧಿಸಿತ್ತು. ಪ್ರಕರಣದಲ್ಲಿ ರಾವತ್‌ ಅವರನ್ನು ಆರೋಪಿ ಎಂದು ಹೆಸರಿಸಿ ಇಡಿ ಕಳೆದ ವಾರ ಪೂರಕ ಚಾರ್ಜ್‌ ಶೀಟ್‌ ಸಲ್ಲಿಸಿತ್ತು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!