ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್
ಇಂಗ್ಲೆಂಡ್ ವಿರುದ್ದ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ತೋರಿದ ಅನುಚಿತ ವರ್ತನೆಗೆ ಟೀಮ್ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಗೆ ಐಸಿಸಿ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಿದೆ.
ಎರಡನೇ ಇನ್ನಿಂಗ್ಸ್ನ 34 ನೇ ಓವರ್ನಲ್ಲಿ ಜೇಮ್ಸ್ ಆಂಡರ್ಸನ್ ಎಸೆತದಲ್ಲಿ ರಾಹುಲ್ ವಿಕೆಟ್ ಗೆ ಮನವಿ ಮಾಡಲಾಗಿತ್ತು. ಚೆಂಡು ಬ್ಯಾಟ್ ಸವರಿ ಕೀಪರ್ ಕೈ ಸೇರಿದ್ದರಿಂದ ಇಂಗ್ಲೆಂಡ್ ಆಟಗಾರರು ಮನವಿ ಮಾಡಿದ್ದರು. ಆದರೆ ಫೀಲ್ಡ್ ಅಂಪೈರ್ ನಾಟೌಟ್ ಎಂದು ನೀಡಿದ ತೀರ್ಪಿನ ವಿರುದ್ದ ಇಂಗ್ಲೆಂಡ್ ನಾಯಕ ಜೋ ರೂಟ್ ಡಿಆರ್ಎಸ್ ಮೊರೆ ಹೋಗಿದ್ದರು. ಚೆಂಡು ಬ್ಯಾಟ್ ಸವರಿ ಕೀಪರ್ ಕೈ ಸೇರಿರುವುದು ಡಿಆರ್ಎಸ್ ಪರಿಶೀಲನೆ ವೇಳೆ ಸ್ಷಷ್ಟವಾಗಿತ್ತು. ಇದಾಗ್ಯೂ ಅಂಪೈರ್ ಔಟ್ ನೀಡುತ್ತಿದ್ದಂತೆ ರಾಹುಲ್ ಅಸಮಾಧಾನ ವ್ಯಕ್ತಪಡಿಸಿ ಹೊರ ನಡೆದಿದ್ದರು.
ಈ ಬಗ್ಗೆ ಆನ್-ಫೀಲ್ಡ್ ಅಂಪೈರ್ಗಳಾದ ರಿಚರ್ಡ್ ಇಲ್ಲಿಂಗ್ವರ್ತ್ ಮತ್ತು ಅಲೆಕ್ಸ್ ವಾರ್ಫ್ ಮ್ಯಾಚ್ ರೆಫರಿಗೆ ದೂರು ನೀಡಿದ್ದರು. ಅದರಂತೆ ಅಂಪೈರ್ ನಿರ್ಧಾರಕ್ಕೆ ಅಸಮ್ಮತಿ ತೋರಿದ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಅವರು ದಂಡ ವಿಧಿಸಿದೆ.