ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸಿದ್ದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.
ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ್ದು, ಅವರ ಬೇಡಿಕೆಯನ್ನು ಈಡೇರಿಸಿದೆ.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಭವಿಷ್ಯಕ್ಕಾಗಿ ಗ್ರ್ಯಾಚುಟಿ ಹಣ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಕುರಿತು ಆರ್ಥಿಕ ಇಲಾಖೆ ಲಿಖಿತ ರೂಪದ ಆದೇಶವನ್ನು ಹೊರಡಿಸಿದೆ.
ಗ್ರಾಚ್ಯೂಟಿ ಸೇರಿ ವಿವಿಧ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕಾಗಿ ಸ್ಪಂದನೆ ನೀಡಿದ ಹಿನ್ನೆಲೆಯಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಕಳೆದ 10 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂಗನವಾಡಿ ಕಾರ್ಯಕರ್ತೆಯರು ಈಗಾಗಲೆ ವಾಪಸ್ ಪಡೆದಿದ್ದಾರೆ.