Saturday, September 6, 2025

ರಾಜ್ಯದ 11 ಪ್ರವಾಸಿ ತಾಣಗಳಿಗೆ ರೋಪ್ ವೇ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಿಗೆ ರೋಪ್ ವೇ ನಿರ್ಮಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ಮಹತ್ವದ ಸಭೆ ನಡೆಯಿತು. ಈ ವೇಳೆ ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಿಗೆ ರೋಪ್ ವೇ ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದೆ.

ಅಂಜನಾದ್ರಿ ಬೆಟ್ಟದ ಪ್ರವಾಸೋದ್ಯಮ ಮತ್ತು ಪೌರಾಣಿಕ ಹಾಗೂ ಆಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿಗೊಳಿಸಬೇಕು ಸಿಎಂ ಸೂಚಿಸಿದ್ದಾರೆ.

ಇದನ್ನೂ ಓದಿ