ಅರಮನೆ ಭೂಮಿಯನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅಧಿಕಾರ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಸರ್ಕಾರ ಅಂಗೀಕರಿಸಿದ ಬೆಂಗಳೂರು ಅರಮನೆ (ಭೂಮಿ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ, 2025 ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ರಾಜ್ಯ ಗೆಜೆಟ್‌ನಲ್ಲಿ ಪ್ರಕಟವಾಗಿದೆ.

ಇದರೊಂದಿಗೆ, ಹಿಂದಿನ ಮೈಸೂರು ರಾಜಮನೆತನ ಸೇರಿದ ಬೆಂಗಳೂರು ಅರಮನೆಯ ಭೂಮಿಯ ಬಳಕೆ ಮತ್ತು ನಿಯಂತ್ರಣ-ಬೆಂಗಳೂರು ಅರಮನೆ ಕಾಯ್ದೆ, 1996 ಅಡಿಯಲ್ಲಿ, ಈಗ ರಾಜ್ಯ ಸರ್ಕಾರಕ್ಕೆ ಸೇರಿದೆ.

ಬೆಜಯಮಹಲ್ ಮತ್ತು ಬಳ್ಳಾರಿ ರಸ್ತೆಯ 2 ಕಿ.ಮೀ. ಉದ್ದದ ಅಗಲೀಕರಣಕ್ಕಾಗಿ 15 ಎಕರೆ 17.5 ಗುಂಟೆ ಭೂಮಿಯನ್ನು ಬಳಸಿಕೊಳ್ಳಲು ಸರ್ಕಾರವು ರಾಜಮನೆತನಕ್ಕೆ ಪರಿಹಾರವಾಗಿ 3,014 ಕೋಟಿ ರೂಪಾಯಿಗಳನ್ನು ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್ ಡಿಸೆಂಬರ್ 10, 2024 ರಂದು ನೀಡಿದ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಈ ಸುಗ್ರೀವಾಜ್ಞೆಯನ್ನು ಪ್ರಕಟಿಸಲು ನಿರ್ಧರಿಸಿತ್ತು. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕಾದರೆ, ಅದು ರಾಜ್ಯದ ಖಜಾನೆಗೆ ಹೊರೆಯಾಗುತ್ತದೆ ಎಂದು ಸರ್ಕಾರ ವಾದಿಸಿತು. ಸರ್ಕಾರ ರಸ್ತೆ ಅಗಲೀಕರಣ ಕಾರ್ಯವನ್ನು ಪುನರಾರಂಭಿಸುತ್ತದೆಯೇ ಅಥವಾ ಸುಪ್ರೀಂ ಕೋರ್ಟ್‌ನ ಅಂತಿಮ ತೀರ್ಪಿಗಾಗಿ ಕಾಯುತ್ತದೆಯೇ ಎಂಬುದು ಕುತೂಹಲಕಾರಿಯಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!