ಮಹಾದೇವ್ ಆಪ್ ಸೇರಿದಂತೆ 21 ಬೆಟ್ಟಿಂಗ್ ಆಪ್​ ಬ್ಯಾನ್​ ಮಾಡಿದ ಕೇಂದ್ರ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ ಸೇರಿದಂತೆ 21 ಬೆಟ್ಟಿಂಗ್‌ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಜಾರಿ ನಿರ್ದೇಶನಾಲಯದ ಶಿಫಾರಸಿನ ಮೇರೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ವೆಬ್‌ಸೈಟ್‌ ಅಥವಾ ಆಪ್‌ ಸ್ಥಗಿತಕ್ಕೆ ಆದೇಶಿಸುವ ಅಧಿಕಾರವು ಛತ್ತೀಸಗಢ ಸರ್ಕಾರಕ್ಕೆ ಇದೆ. ಆದರೆ ಛತ್ತೀಸ್‌ಗಢ ಸರ್ಕಾರವು ಯಾವುದೇ ಮನವಿ ಮಾಡಿಲ್ಲ. ಇಡಿ ಕಡೆಯಿಂದ ಬಂದ ಮನವಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಹೇಳಿದ್ದಾರೆ.

ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!