ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸರ್ಕಾರಿ ಬಸ್‌ಗಳ ಚಾಲಕರಿಂದ ಅಪಘಾತಗಳ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಸಾರಿಗೆ ಸಚಿವರು ನಾಲ್ಕು ನಿಗಮಗಳಿಗೂ ವಾರ್ನಿಂಗ್ ನೀಡಿ, ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಮಹತ್ವದ ಸೂಚನೆಯನ್ನು ನೀಡಿದ್ದಾರೆ.
ಸರ್ಕಾರಿ ಬಸ್ ಚಾಲಕರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕೆಲವೊಂದು ಪ್ರಕರಣಗಳಲ್ಲಿ ವಾಹನಗಳ ಸಮಸ್ಯೆಯಿಂದಾಗಿ ಅಪಘಾತವಾದರೆ, ಬಹುತೇಕ ಘಟನೆಗಳಲ್ಲಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತವಾಗಿ ಸಾರ್ವಜನಿಕರು ಪ್ರಾಣ ಕಳೆದುಕೊಂಡಿದ್ದಾರೆ.
ಹೀಗಾಗಿ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಚಿವರೇ ಖುದ್ದು ನಾಲ್ಕು ನಿಗಮಗಳಿಗೆ ಅನ್ವಯವಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಯಾವುದೇ ಸರ್ಕಾರಿ ಬಸ್ ಚಾಲಕರು ಅಜಾಗರೂಕತೆಯಿಂದ ಚಾಲನೆ ಮಾಡಿ, ತೊಂದರೆ ಉಂಟು ಮಾಡುತ್ತಾರೋ ಅಂತಹ ಚಾಲಕರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.