Wednesday, October 22, 2025

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಿರುವವರ ಹಿತ ಕಾಯಲು ಸರ್ಕಾರ ಬದ್ಧ: ಗೃಹಸಚಿವ ಡಾ. ಜಿ. ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಿರುವವರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮೈಸೂರಿಗೆ ಇಂದು ಭೇಟಿ ನೀಡಿದ ಸಂದರ್ಭ ಕೈಗಾರಿಕೆಗಳು ಆಂಧ್ರಪ್ರದೇಶಕ್ಕೆ ಸ್ಥಳಂತರವಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಪರಿಸರ ವ್ಯವಸ್ಥೆ ಚೆನ್ನಾಗಿದ್ದು, 10 ಲಕ್ಷ ಕೋಟಿ ರೂಪಾಯಿಗಳ ಒಡಂಬಡಿಕೆಗೆ ಸಹಿಯಾಗಿದೆ ಎಂದು ಹೇಳಿದ್ದಾರೆ.

ಒಂದು ವೇಳೆ ರಾಜ್ಯದಲ್ಲಿ ಒಳ್ಳೆಯ ವಾತಾವರಣ ಇಲ್ಲ ಎನ್ನುದಾದರೆ ಬಂಡವಾಳ ಹೂಡಿಕೆಗೆ ಸಹಿ ಮಾಡುತ್ತಿರಲಿಲ್ಲ ಎಂದು ತಿಳಿಸಿದ್ದಾರೆ. ರಸ್ತೆ ಹಾಗೂ ಕೆಲವು ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಆಶ್ವಾಸನೆ ನೀಡಿದ್ದಾರೆ. ಗೂಗಲ್ ಸಂಸ್ಥೆ ಆಂಧ್ರಪ್ರದೇಶಕ್ಕೆ ಹೋಗಿರುವುದಕ್ಕೆ ಹಲವು ಕಾರಣಗಳಿದ್ದು, ಕೈಗಾರಿಕಾ ಸಚಿವರು ಹಾಗೂ ಮುಖ್ಯಮಂತ್ರಿಗಳು ಅವರ ಚರ್ಚಿಸಲಿದ್ದಾರೆ ಎಂದು ತಿಳಿಸಿದರು.

error: Content is protected !!