ಅತಿಥಿ ಉಪನ್ಯಾಸಕರಿಗೆ ಸರಕಾರದಿಂದ ಸಂಕ್ರಾಂತಿ ಕೊಡುಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರಕಾರದಿಂದ ಸಂಕ್ರಾಂತಿ ಕೊಡುಗೆ ನೀಡಲಾಗಿದೆ. ಅತಿಥಿ ಉಪನ್ಯಾಸಕರ ಬೇಡಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಸಿಎಂ, ‘ಉಪನ್ಯಾಸಕರ ಬೇಡಿಕೆಯ ಶಿಫಾರಸುಗಳಿಗೆ ಸಮ್ಮತಿ ಸೂಚಿಸಿ ಇಂದು ಕಡತ ವಿಲೇವಾರಿ ಮಾಡಲಾಗಿದೆ. ಇವು ಅತಿಥಿ ಉಪನ್ಯಾಸಕರ ಬಹು ದಿನಗಳ ಬೇಡಿಕೆಯಾಗಿದ್ದವು. ಈ ಸಂಬಂಧ ರಚಿಸಲಾಗಿದ್ದ ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಅನುಕೂಲ ಆಗಲಿದೆ. ಕರ್ನಾಟಕ ಸರಕಾರದ ವತಿಯಿಂದ ಎಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ’ ಎಂದು ಹೇಳಿದ್ದಾರೆ.
ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ
ಯುಜಿಸಿ ಅರ್ಹತೆ ಹೊಂದಿ ಐದು ವರ್ಷಕ್ಕಿಂತ ಮೇಲ್ಪಟ್ಟವರಿಗೆ ₹ 13ಸಾವಿರದಿಂದ ₹ 32ಸಾವಿರಕ್ಕೆ ಸಂಬಳ ಏರಿಕೆ ಮಾಡಲಾಗಿದೆ. ಯುಜಿಸಿ ಅರ್ಹತೆ ಇದ್ದು ಐದು ವರ್ಷಗಳಿಂದ ಕಡಿಮೆ ಸೇವೆ ಸಲ್ಲಿಸಿದವರಿಗೆ ₹ 11ಸಾವಿರದಿಂದ ₹ 28ಸಾವಿರಕ್ಕೆ ವೇತನ ಹೆಚ್ಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!