ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡಲು ಅವಕಾಶ ಇಲ್ಲ. ನನ್ನ ಇಲಾಖೆಯಲ್ಲಿ ಇಂತಹದ್ದನ್ನ ಸಹಿಸೋಕೆ ಸಾಧ್ಯವಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸರ್ಕಾರಿ ನೌಕರರಿಗೆ ಕಾನೂನು ಇದೆ. ಇಂತಹ ಸಮಸ್ಯೆ ಇದ್ದರೆ ಇಲಾಖೆ ಗಮನಕ್ಕೆ ತರಬೇಕು. ಪ್ರತಿಭಟನೆ ಮಾಡೋದು ಸರಿಯಲ್ಲ, ಹೀಗೆ ಪ್ರತಿಭಟನೆ ಮಾಡಿದರೆ ಅದನ್ನ ಸಹಿಸೋಕೆ ಆಗುವುದಿಲ್ಲ. ನನ್ನ ಇಲಾಖೆಯಲ್ಲಿ ಇದಕ್ಕೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.