Thursday, March 23, 2023

Latest Posts

ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ, ಯಾವ ಸೇವೆಗಳು ಸಿಗೋದಿಲ್ಲ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಳನೇ ವೇತನ ಆಯೋಗ ಜಾರಿ, ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡದ್ದನ್ನು ಖಂಡಿಸಿ ಹಾಗೂ ಹೊಸ ಪಿಂಚಣಿ ನೀತಿ ರದ್ದತಿಗೆ ಆಗ್ರಹಿಸಿ 5.11ಲಕ್ಷ ನೌಕರರು ನಾಳೆಯಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಮಾಡಲಿದ್ದಾರೆ.

ಗ್ರಾಮ ಪಂಚಾಯಿತಿ ಸಿಬ್ಬಂದಿ, ಶಿಕ್ಷಕರು, ನಗರ ಸ್ಥಳೀಯ ಸಂಸ್ಥೆಗಳು, ಬಿಬಿಎಂಪಿ ಕಾಯಂ ಪೌರಕಾರ್ಮಿಕರು, ಉಪನೋಂದಣಾಧಿಕಾರಿ ಕಚೇರಿ ಸಿಬ್ಬಂದಿ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಶಾಲಾ ಕಾಲೇಜು, ತ್ಯಾಜ್ಯ ವಿಲೇವಾರಿ, ಕಂದಾಯ ಮತ್ತು ಆರೋಗ್ಯ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಕರ್ನಾಟಕ ಸಚಿವಾಲಯದ ನೌಕಕರು, ಅರಣ್ಯ ಇಲಾಖೆಯ ನೌಕರರು, ವಿವಿಧ ನಿಗಮ ಮಂಡಳಿಗಳ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಿದ್ದಾರೆ. ಕಸ ಸಂಗ್ರಹಣೆ, ಶಾಲಾ ಕಾಲೇಜುಗಳು, ಹೊರ ರೋಗಿಗಳ ಸೇವೆ, ಆಸ್ತಿ ನೋಂದಣಿ, ತಹಸೀಲ್ದಾರ್ ಕಚೇರಿ ಕಾರ್ಯ ನಿರ್ವಹಿಸುವುದು ಬಹುತೇಕ ಅನುಮಾನವಾಗಿದೆ.

ಯಾವ ಸೇವೆ ಸಿಗಲಿದೆ?
ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ, ಒಳರೋಗಿಗಳ ಆರೈಕೆ ಸೇವೆ, ಬಸ್ ಸಂಚಾರ, ವಿಶ್ವವಿದ್ಯಾಲಯಗಳಲ್ಲಿ ತರಗತಿ ನಡೆಯಲಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!