ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಆಯವ್ಯಯದಲ್ಲಿ ರಾಜ್ಯದ ಶೈಕ್ಷಣಿಕ ವಲಯಕ್ಕೆ ಸಂಬಂಧಿಸಿದಂತೆ ಎರಡು ಅತ್ಯಂತ ಮಹತ್ವದ ತೀರ್ಮಾನಗಳನ್ನು ಪ್ರಕಟಿಸಲಾಗಿದೆ.
ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ಪುನಾರಂಭಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಇದರೊಂದಿಗೆ, ಕ್ಯಾಂಪಸ್‌ಗಳಲ್ಲಿ ನಡೆಯುವ ದೌರ್ಜನ್ಯ ಮತ್ತು ತಾರತಮ್ಯಕ್ಕೆ ಇತಿಶ್ರೀ ಹಾಡಲು ಬಹುನಿರೀಕ್ಷಿತ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೆ ತರುವುದಾಗಿ ಘೋಷಿಸಿದೆ.
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸಲು ಮತ್ತು ಕ್ಯಾಂಪಸ್ ಸಮಸ್ಯೆಗಳಿಗೆ ಧ್ವನಿಯಾಗಲು ಚುನಾವಣೆಗೆ ಅವಕಾಶ ನೀಡಲಾಗಿದೆ.
ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲಾಗುವ ಕಿರುಕುಳ ತಡೆಯಲು ರೋಹಿತ್ ವೇಮುಲ ಕಾಯ್ದೆ ರಕ್ಷಣಾ ಕವಚವಾಗಲಿದೆ.
ದೌರ್ಜನ್ಯ ಎಸಗುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲು ಈ ಕಾಯ್ದೆ ಬಲ ನೀಡಲಿದೆ.



