ಹೊಸದಿಗಂತ ಕಲಬುರಗಿ:
ಕೇವಲ ತಮ್ಮ ಪುಕ್ಸಟ್ಟೆ ಪ್ರಚಾರಕ್ಕಾಗಿ ಆಯೋಜನೆ ಮಾಡಿದ ಸಂಭ್ರಮೋತ್ಸವದಲ್ಲಿ ಕಾಲ್ತುಳಿತಕ್ಕೆ 11 ಜನ ಅಮಾಯಕರ ಸಾವಾಗಿದ್ದು, ಭದ್ರತೆ ನೀಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ ನೈತಿಕತೆ ಇದ್ದಲ್ಲಿ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದ ಹೊರವಲಯದ ನಾಗನಹಳ್ಳಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಾಗಿನಿಂದ ಭ್ರಷ್ಟಾಚಾರ ಹಾಗೂ ಸರ್ವಾಧಿಕಾರಿ ಧೋರಣೆ ಮೀತಿಮೀರಿದೆ. ಅಧಿಕಾರಿಗಳ ಮೂಲಕ ಹರಾಶಮೆಂಟ್ ನಡೆಯುತ್ತಿದೆ.ಯಾರದೋ ಮಾಡಿದ ತಪ್ಪಿಗಾಗಿ ಪೋಲಿಸ್ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂದ ಅವರು, ಕೂಡಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಕಳೆದ 11 ವರ್ಷಗಳ ಆಡಳಿತದ ಅವಧಿಯಲ್ಲಿ ಮಾಡಿದ ಜನಪರ ಯೋಜನೆ, ದೇಶದಲ್ಲಿ ಆದ ಬದಲಾವಣೆ ಕಂಡು ಇಡೀ ವಿಶ್ವವೇ ಭಾರತದತ್ತ ಮುಖ ಮಾಡಿ ನೋಡುತ್ತಿದೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದಲ್ಲಿ ಪರ್ಯಾಯ ನಾಯಕ ಮತ್ತೋಬ್ಬರಿಲ್ಲ ಎಂದು ಹೇಳಿದರು.