ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್‌ನಲ್ಲಿ ಮದ್ಯದ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು. ಅಂತೆಯೇ ಸಿಎಂ ಸಿದ್ದರಾಮಯ್ಯ ಮದ್ಯದ ದರ ಮತ್ತೆ ಹೆಚ್ಚಳ ಎಂದು ಘೋಷಿಸಿದ್ದಾರೆ.
ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಐಎಮ್‌ಎಲ್, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
2023-24ನೇ ಸಾಲಿನ ಜನವರಿ ಅಂತ್ಯಕ್ಕೆ 18,181ಕೋಟಿ ರೂಪಾಯಿ ತೆರಿಗೆ ಪಡೆಯಲಾಗಿದೆ, 2024-25ನೇ ಸಾಲಿನ ಜನವರಿ ಅಂತ್ಯಕ್ಕೆ 38,525 ಕೋಟಿ ರೂ.ಗಳ ತೆರಿಗೆ ಸಂಗ್ರಹ ಗುರಿಯನ್ನು ನಿಗದಿ ಮಾಡಲಾಗಿದೆ.