Tuesday, December 6, 2022

Latest Posts

ಅಡಿಕೆ ಬೆಳೆಯ ಎಲೆಚುಕ್ಕೆ‌ ರೋಗ ನಿಯಂತ್ರಣಕ್ಕೆ ಸರಕಾರದಿಂದ 8 ಕೋಟಿ ರೂ.ಮಂಜೂರು

ಹೊಸದಿಗಂತ ವರದಿ ಮಡಿಕೇರಿ:

ಕೊಡಗು ಸೇರಿದಂತೆ ರಾಜ್ಯದ ಮಲೆನಾಡು ಹಾಗೂ ಕರಾವಳಿಯ ಏಳು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಒಟ್ಟು 8 ಕೋಟಿ ರೂ.ಗಳ ಅನುದಾನ ಮಂಜೂರು‌ ಮಾಡಿರುವ ರಾಜ್ಯ ಸರಕಾರ, ತಕ್ಷಣಕ್ಕೆ ರೈತರಿಗೆ ವಿತರಿಸಲು 4 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿದೆ.

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿದ್ದು, ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಮತ್ತು ಹಾಸನ ಜಿಲ್ಲೆಗಳ ಒಟ್ಟು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಹರಡಿದೆ. ಇದರ ನಿಯಂತ್ರಣಕ್ಕೆ ಔಷಧಿ ಸಿಂಪರಣೆ ಹಾಗೂ ಸಿಂಪರಣೆ ವೆಚ್ಚ ಭರಿಸಲು ತೋಟಗಾರಿಕಾ ಇಲಾಖೆ ಅನುದಾನ ಬಿಡುಗಡೆಗೊಳಿಸಿದೆ ಎಂದು ಅವರು ವಿವರಿಸಿದ್ದಾರೆ.

ರೋಗ ನಿಯಂತ್ರಣಕ್ಕೆ ಉತ್ತಮ ಗುಣ ಮಟ್ಟದ ಸಸ್ಯ ಸಂರಕ್ಷಣೆ ಔಷಧ ಕೊಳ್ಳಲು, ಪ್ರತಿ ಹೆಕ್ಟೇರ್’ಗೆ 4 ಸಾವಿರ ರೂ.ಗಳಂತೆ ಮೊದಲ ಸಿಂಪರಣೆಗಾಗಿ ಗರಿಷ್ಠ 1.5 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ರೈತರಿಗೆ ಅನುದಾನ ಒದಗಿಸಲಾಗುವುದು. ರೈತ ಬಾಂಧವರು ಇದರ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!