September 22, 2026
Tuesday, September 22, 2026
spot_img

‘ರಾಜ್ಯದ ವಾಸ್ತವ ಸ್ಥಿತಿ ಮುಚ್ಚಿಟ್ಟ ಸರ್ಕಾರ’: ಜುಲೈ 31ರಂದು ಕೆಆರ್‌ಎಸ್ ಮುತ್ತಿಗೆಗೆ ಬಿಜೆಪಿ ಕರೆ

ಹೊಸದಿಗಂತ ವರದಿ ಮಂಡ್ಯ:

ಮಂಡ್ಯ : ಕಾವೇರಿ ನೀರು ನಿರ್ವಹಣಾ ಸಮಿತಿ ಹಾಗೂ ಪ್ರಾಧಿಕಾರಕ್ಕೆ ರಾಜ್ಯದ ವಾಸ್ತವ ಸ್ಥಿತಿಯನ್ನು ವೈಜ್ಞಾನಿಕ ಅಂಕಿ-ಅಂಶಗಳೊಂದಿಗೆ ಮನವರಿಕೆ ಮಾಡಿಕೊಡುವಲ್ಲಿ  ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನವನ್ನು ಖಂಡಿಸಿ ಜು. 31ರಂದು ಕೆ.ಆರ್.ಎಸ್. ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥನಾರಾಯಣ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಜಲಾಶಯಗಳಲ್ಲಿನ ನೀರಿನ ಸಂಗ್ರಹ, ಮಳೆ ಕೊರತೆ, ಬೆಳೆಗಳ ಸ್ಥಿತಿ ಹಾಗೂ ಕುಡಿಯುವ ನೀರಿನ ಅಗತ್ಯತೆಗಳನ್ನು ಸಮರ್ಪಕವಾಗಿ ಪ್ರತಿಪಾದಿಸದಿರುವುದೇ ಈ ಪರಿಸ್ಥಿತಿಗೆ ಕಾರಣವಾಗಿದ್ದು, ರೈತರ ಹಿತಾಸಕ್ತಿಗಿಂತ ರಾಜಕೀಯ ಪ್ರದರ್ಶನಕ್ಕೆ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಹೆಚ್ಚು ಆಧ್ಯತೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ;

ಎರಡು ತಿಂಗಳ ಹಿಂದೆಯೇ ಹವಾಮಾನ ಇಲಾಖೆ ಮಳೆ ಕೊರತೆ ಬಗ್ಗೆ ಎಚ್ಚರಿಕೆ ನೀಡಿದೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅದನ್ನು ಗಂಭೀರವಾಗಿ ತೆಗೆದುಕೊಳ್ಳದೆ ಬೇಜವಾಬ್ದಾರಿತನದಿಂದ ವರ್ತಿಸಿದ್ದರ ಪರಿಣಾಮ ಇಂದು ಸಿಡಬ್ಲ್ಯೂಆರ್‌ಸಿ ತಮಿಳುನಾಡಿಗೆ ನಿರಂತರ 3500 ಕ್ಯೂಸೆಕ್‌ನಂತೆ 15 ದಿನಗಳ ಕಾಲ 4.6 ಟಿಎಂಸಿ ನೀರು ಹರಿಸುವಂತೆ ಆದೇಶ ನೀಡಿದೆ. ಈಗ ಕಣ್ಣು ಬಿಟ್ಟ ಸರ್ಕಾರ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸುವುದಾಗಿ ಸಬೂಬು ಹೇಳುತ್ತಿದೆ ಎಂದು ದೂರಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !