ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ವಿಚಾರದಲ್ಲಿ ಸರ್ಕಾರ ಎಡವಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನಮ್ಮ ಸರ್ಕಾರ ಸೂಕ್ತವಾದ ರೀತಿಯಲ್ಲಿ ವಾದ ಮಾಡಲು ಸಫಲವಾಗಿಲ್ಲ ಎಂದು ವಿಪಕ್ಷಗಳು ಆರೋಪಿಸಿವೆ.
ಇನ್ನು ರೈತರು, ಕನ್ನಡಪರ ಹೋರಾಟ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ನೀರು ಬಿಟ್ಟರೆ ಕುಡಿಯಲು ನೀರು ಇಲ್ಲದಂತೆ ಆಗುತ್ತದೆ. ಇದಕ್ಕೆ ಪರಿಹಾರ ನೀಡಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತಿವೆ.
ನಮ್ಮ ವಕೀಲರು ಕೋರ್ಟ್ ಪ್ರೊಸೀಡಿಂಗ್ ನೋಡಿದ್ದಾರೆ, ರಾಜ್ಯದ ಲೀಗಲ್ ಟೀಂ ಸರಿಯಾಗಿ ವಾದ ಮಾಡಿಲ್ಲ. ಇನ್ನಷ್ಟು ಸೂಕ್ಷ್ಮವಾಗಿ ಮಾತನಾಡಬೇಕಿತ್ತು. ನಮ್ಮ ಸರ್ಕಾರದ ಒಂದು ಎಡವಿದ ಹೆಜ್ಜೆ ಎಷ್ಟೋ ರೈತರಿಗೆ ಸಂಕಷ್ಟ ತಂದಿಟ್ಟಿದೆ. ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಬೇಕಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.