ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ.
ಚೈತನ್ಯಾ ಬೀಳಗಿ ಅವರಿಗೆ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕ ಉದ್ಯೋಗ ನೀಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪುತ್ರಿ ಚೈತನ್ಯಾ ಎಮ್.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಇಂದು ಹಸ್ತಾಂತರಿಸಿ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಕೋರಿದೆ ಎಂದು ತಿಳಿಸಿದ್ದಾರೆ.



