ಹೊಸದಿಗಂತ ವರದಿ, ಮಡಿಕೇರಿ:
ಇತ್ತೀಚೆಗೆ ಕಾಶ್ಮೀರದಲ್ಲಿ ಹಿಮಪಾತಕ್ಕೆ ಸಿಲುಕಿ ಹುತಾತ್ಮರಾದ ಕೊಡಗಿನ ಯೋಧ ಅಲ್ತಾಫ್ ಅವರ ಪತ್ನಿ ಹಾಗೂ ಮಕ್ಕಳನ್ನು ಸಂಸದ ಪ್ರತಾಪ್ ಸಿಂಹ ಭೇಟಿ ಮಾಡಿ ಸಾಂತ್ವನ ಹೇಳಿದರು.
ಅಲ್ತಾಫ್ ಅವರ ಪತ್ನಿ ಹಾಗೂ ಮಕ್ಕಳನ್ನು ಎಡಪಾಲದಲ್ಲಿರುವ ನಿವಾಸದಲ್ಲಿ ಭೇಟಿ ಮಾಡಿದ ಅವರು ಕುಟುಂಬಕ್ಕೆ 50 ಸಾವಿರ ರೂ.ಗಳ ಧನಸಹಾಯ ನೀಡಿದರಲ್ಲದೆ, ಬಾಡಿಗೆ ಮನೆಯಲ್ಲಿರುವ ಕುಟುಂಬಕ್ಕೆ ಸರಕಾರಿ ಜಮೀನು ಮಂಜೂರು ಮಾಡಿಸುವ ಭರವಸೆ ನೀಡಿದರು.
ಅಲ್ಲದೆ ತಕ್ಷಣವೇ ಈ ಬಗ್ಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.