ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ಸಾಂಕ್ರಾಮಿಕ ಕೋವಿಡ್ -19 ಸೋಂಕು ಹೆಚ್ಚುತ್ತಿರುವ ಹಾಗೂ ವಿದೇಶಗಳಲ್ಲಿ ಸೋಂಕಿನ ರೂಪಾಂತರ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರ್ಟಿಪಿಸಿಆರ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲು ರಾಜ್ಯ ಸರಕಾರ ಆದೇಶಿಸಿದೆ. ಈಗಿರುವ 60ಸಾವಿರ ಪರೀಕ್ಷೆಗಳನ್ನು 80ಸಾವಿರಕ್ಕೆ ಹೆಚ್ಚಿಸಿ ಆದೇಶಿಸಲಾಗಿದೆ.
ಪ್ರತಿದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 5 ಸಾವಿರ ಮತ್ತು ರಾಜ್ಯದ ಜಿಲ್ಲೆಗಳಲ್ಲಿ 15 ಸಾವಿರ ಹೆಚ್ಚುವರಿ ತಪಾಸಣೆ ನಡೆಸಬೇಕು. ಶೇ. 50 ತಪಾಸಣೆ ಜಿಲ್ಲಾ ಮಟ್ಟದಲ್ಲಿ ನಡೆಯಬೇಕು. ಪ್ರತಿ ವಾರ ಶೇ. 5ರಷ್ಟು ಮಕ್ಕಳಿಗೆ ತಪಾಸಣೆ ನಡೆಸಬೇಕು ಎಂದು ಸೂಚಿಸಲಾಗಿದೆ.
ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ, ಹಾಂಗ್ ಕಾಂಗ್ ನಿಂದ ಬರುವರಿಗೆ ಕೋವಿಡ್ ತಪಾಸಣೆ ಕಡ್ಡಾಯವಾಗಿದೆ. ಅಲ್ಲದೇ ಕೋವಿಡ್ ಪಾಸಿಟಿವ್ ಇರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಹೋಲ್ ಜಿನೋಮ್ ಸೀಕ್ವೆಂನ್ಸಿಂಗ್ ಕಡ್ಡಾಯಗೊಳಿಸಿ ಸರಕಾರ ಆದೇಶ ಹೊರಡಿಸಿದೆ.