ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಜನ್ಯ ಕೊಬ್ಬು ಬಳಕೆ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೆಎಂಎಫ್ ನಂದಿನಿ ತುಪ್ಪವನ್ನು ಹೊರತುಪಡಿಸಿ ಉಳಿದ ಎಲ್ಲಾ ಬ್ರ್ಯಾಂಡ್ ಗಳ ತುಪ್ಪ ಪರಿಶೀಲನೆಗೆ ಆದೇಶ ನೀಡಿದೆ.
ರಾಜ್ಯದಲ್ಲಿ ಕೆಎಂಎಫ್ ನಂದಿನಿ ತುಪ್ಪ ಹೊರತುಪಡಿಸಿ ಉಳಿದ ಬ್ರ್ಯಾಂಡ್‌ಗಳ ತುಪ್ಪ ಪರಿಶೀಲನೆ ನಡೆಸುವಂತೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಹೊರತುಪಡಿಸಿ ಉಳಿದ ಎಲ್ಲಾ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ ಪರೀಕ್ಷಿಸುವ ಬದಲು, ಬಳಸುವ ತುಪ್ಪದ ಪರಿಶೀಲನೆ ಕೈಗೊಳ್ಳುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಸಾಮಾನ್ಯ ಜನರು ನಿತ್ಯ ಬಳಸುವ ಆಹಾರ ಪದಾರ್ಥಗಳನ್ನು, ಬೇಳೆಕಾಳುಗಳನ್ನು ಬಹಳ ಪ್ರಮುಖವಾಗಿ ಖಾದ್ಯ ತೈಲಗಳ ನ್ನು ಪರೀಕ್ಷಿಸುವ ಎದೆಗಾರಿಕೆ,ಪ್ರಾಮಾಣಿಕತೆ ತೋರಿಸಿ ಜನಸ್ನೇಹಿ ಸರಕಾರವೆಂದು ರುಜುವಾತು ಪಡಿಸಲಿ.