ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಒಟ್ಟು 12 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ಸರ್ಕಾರ ರದ್ದು ಮಾಡಲು ಸಂಚು ರೂಪಿಸಿದೆ ಎಂದು ಆರೋಪ ಮಾಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಸಂಚು ಮಾಡುತ್ತಿದ್ದಾರೆ. ಬಡವರ ರೇಷನ್ ಕಾರ್ಡ್ ರದ್ದಾಗುತ್ತಿರುವುದರಿಂದ ಕಾಂಗ್ರೆಸ್ ರಕ್ತ ಹೀರುವ ಸರ್ಕಾರವಾಗಿದೆ. ರೇಷನ್ ಕಾರ್ಡ್ ರದ್ದು ಮಾಡುವುದನ್ನು ಕೂಡಲೇ ನಿಲ್ಲಿಸಬೇಕು. ರೇಷನ್ ಕಾರ್ಡ್ ಕೊಡುವಾಗ ಅಧಿಕಾರಿಗಳು ಕತ್ತೆ ಕಾಯುತಿದ್ರ? ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಿದ್ದಾರೆ ಅಂತಹ ಅಧಿಕಾರಿಯನ್ನು ಅಮಾನತುಗೊಳಿಸಿ ಎಂದು ಆಗ್ರಹಿಸಿದ್ದಾರೆ.