ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸರ್ಕಾರಿ ಶಾಲೆಯೊಂದು ಜಲಾವೃತಗೊಂಡಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಮಂಗಳವಾರ ರಾತ್ರಿಯಿಂದ ಶುರುವಾದ ಮಳೆ ನಿರಂತರವಾಗಿ 12 ಗಂಟೆಗಳ ಕಾಲ ಸುರಿದಿದೆ. ಪರಿಣಾಮ ವಿಜಯಪುರ ಜಿಲ್ಲೆಯ ತಿಕೋಟ ಗ್ರಾಮದ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯೊಂದು ಸಂಪೂರ್ಣವಾಗಿ ಜಲಾವೃತಗೊಂಡಿದೆ.
ಶಾಲಾ ಆವರಣ ಕೆರೆಯಂತಾಗಿದ್ದು, ಕೊಠಡಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ವಿದ್ಯಾರ್ಥಿಗಳು ನೀರು ಹೊರಹಾಕಲು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ನೀರಿನ ಪ್ರಮಾಣದಲ್ಲಿ ಇಳಿಮುಖ ಕಂಡಿದೆ.