ಹೊಸದಿಗಂತ ವರದಿ ಹುಬ್ಬಳ್ಳಿ:
ತಾಲೂಕಿನ ಕಿರೇಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಯ ಗೊಡೆ ಕುಸಿದು ಶಾಲೆಯ ವಿದ್ಯಾರ್ಥಿ ಮೃತಪಟ್ಟಿದ್ದು, ಇನ್ನೊಬ್ಬ ವಿದ್ಯಾರ್ಥಿ ಗಾಯಗೊಂಡ ಘಟನೆ ಬೆಳಿಗ್ಗೆ ನಡೆದಿದೆ.
3ನೇ ತರಗತಿ ವಿಸ್ತೃತ ಪ್ರಕಾಶ ಬೆಳಗಲಿ(9) ಮೃತಪಟ್ಟ ವಿದ್ಯಾರ್ಥಿ. ಏಳನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ನಾಗವಿ ಗಾಯಗೊಂಡಿದ್ದಾನೆ. ಶಾಲೆಯ ನೂತನ ಕಟ್ಟಡ ನಿರ್ಮಿಸಲಾಗುತ್ತಿತ್ತು. ಬೆಳಿಗ್ಗೆ ಈ ಇಬ್ಬರು ಮಕ್ಕಳ ಆಟವಾಡಲು ಹೋದಾಗ ಏಕಾಏಕಿ ಗೊಡೆ ಕುಸಿದಿದೆ. ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮೃತ ದೇಹ ಹಾಗೂ ಗಾಯಗೊಂಡ ವಿದ್ಯಾರ್ಥಿಯನ್ನು ನಗರದ ಕಿಮ್ಸ್ ಆಸ್ಪತ್ರೆ ರವಾಣಿಸಲಾಗಿದೆ. ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.