ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದ ಆದೇಶವನ್ನು ಉಲ್ಲೇಂಘಿಸಿದಕ್ಕೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ಮತ್ತು ರಚಿತಾ ರಾಮ್ ಅಭಿನಯದ ಕಲ್ಟ್ ಸಿನಿಮಾದ ಶೂಟಿಂಗ್‌ಗೆ ಅರಣ್ಯ ಇಲಾಖೆ ಶಾಕ್ ನೀಡಿದ್ದು ಚಿತ್ರೀಕರಣ ಸ್ಥಗಿತಗೊಂಡಿದೆ.
ಕಳೆದ ಕೆಲ ದಿನಗಳಿಂದ ಕಲ್ಟ್ ಚಿತ್ರ ತಂಡವು ಹಂಪಿ ಸೇರಿದಂತೆ ನಾನಾ ಕಡೆಗಳಲ್ಲಿ ಚಿತ್ರೀಕರಣ ನಡೆಸಿದೆ. ಅದೇ ರೀತಿಯಾಗಿ ತಾಲೂಕಿನ ರಂಗಾಪೂರ, ಸಣಾಪೂರ ಕೆರೆ ಭಾಗದಲ್ಲಿ ಚಿತ್ರೀಕರಣಕ್ಕೆ ಸೆಟ್ ಹಾಕಿತ್ತು.
ಸಣಾಪೂರ ಗ್ರಾಮದ ತುಂಗಭದ್ರಾ ನದಿ ದಡದಲ್ಲಿ ಬೆಂಕಿ ಹಚ್ಚಿ ಚಿತ್ರೀಕರಣ ಮಾಡಲು ಮುಂದಾಗಿದೆ. ಅನುಮತಿ ಪಡೆಯದೇ ಶೂಟಿಂಗ್‌ಗೆ ಮುಂದಾಗಿದ್ದಕ್ಕೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿ ತಡೆ ನೀಡಿದ್ದಾರೆ.
ಝೈದ್ ಖಾನ್ ನಟಿಸುತ್ತಿರುವ ‘ಕಲ್ಟ್’ ಸಿನಿಮಾ ತಂಡವು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರ, ರಂಗಾಪುರ ಬಳಿ ಚಿತ್ರೀಕರಣಕ್ಕೆ ಮುಂದಾಗಿತ್ತು. ಆದರೆ ಚಿತ್ರತಂಡ ಸೂಕ್ತ ಅನುಮತಿಯನ್ನು ಪಡೆದಿರಲಿಲ್ಲವಾದ್ದರಿಂದ ಸ್ಥಳೀಯ ಅರಣ್ಯ ಅಧಿಕಾರಿಗಳು ಚಿತ್ರೀಕರಣ ತಂಡಕ್ಕೆ ನೊಟೀಸ್ ನೀಡಿದೆ. ಚಿತ್ರೀಕರಣವನ್ನು ಬಂದ್ ಮಾಡುವಂತೆ ಸೂಚಿಸಿದೆ. ಅದರಂತೆಯೇ ‘ಕಲ್ಟ್’ ಸಿನಿಮಾದ ಚಿತ್ರೀಕರಣಕ್ಕೆ ತಡೆ ನೀಡಲಾಗಿದೆ.